
ವೆನ್ನಪ್ಪುವಾ, ಮಾರ್ಚ್ 11: ಬೈಕ್ನಲ್ಲಿ ಹೋಗುತ್ತಿದ್ದ ಯುವತಿಯನ್ನು ಅಡ್ಡಗಟ್ಟಿ ಕಳ್ಳನೊಬ್ಬ ಆಕೆಯ ಕತ್ತಿನಲ್ಲಿದ್ದ ಚಿನ್ನದ ಸರ ದೋಚಿರುವ ಘಟನೆ ಶ್ರೀಲಂಕಾದಲ್ಲಿ ನಡೆದಿದೆ. ವೆನ್ನಪ್ಪುವಾದ ಥಂಬರವಿಲಾ ಪ್ರದೇಶದಲ್ಲಿ ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ಘಟನೆಯನ್ನು ಸೆರೆಹಿಡಿದಿದೆ.ಆರೋಪಿಯು ಬೈಕ್ನಲ್ಲಿ ಬಂದು ಸ್ಕೂಟಿಯಲ್ಲಿ ಹೋಗುತ್ತಿದ್ದ ಯುವತಿಯನ್ನು ಅಡ್ಡಗಟ್ಟಿ ಆಕೆಯನ್ನು ಬೀಳಿಸಿ ಸರ ಕದ್ದು ಪರಾರಿಯಾಗಲು ಯತ್ನಿಸಿದ್ದಾನೆ. ಆದರೆ ಬೈಕ್ನಲ್ಲಿ ಪೆಟ್ರೋಲ್ ಇಲ್ಲದ ಕಾರಣ ಸಾರ್ವಜನಿಕರ ಕೈಗೆ ಸಿಕ್ಕಿ ಒದೆ ತಿಂದಿದ್ದಾನೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ