Video: ಹಸುವಿಗೆ ಮೇವು ಹಾಕಲು ಹೋದವನ ಮೇಲೆ ಸಿಂಹ ದಾಳಿ, ತಲೆ ಸವರಿದರೂ ಬಿಡಲಿಲ್ಲ ಕಾಡಿನ ರಾಜ – Kannada News | Gujarat Lion Attack: Viral Video Shows Man Mauled by Lion in Bhavnagar

ಭಾವನಗರ , ಜುಲೈ 07: ಗುಜರಾತ್‌ನ ಭಾವನಗರದಲ್ಲಿ ಸಿಂಹ(Lion)ವೊಂದು ವ್ಯಕ್ತಿಯ ಮೇಲೆ ಭೀಕರವಾಗಿ ದಾಳಿ ಮಾಡಿರುವ ಘಟನೆ ನಡೆದಿದೆ. ಸಿಂಹವು ಆ ವ್ಯಕ್ತಿಯನ್ನು ನೆಲಕ್ಕೆ ತಳ್ಳಿ, ಆತನ ಕಾಲು ಮತ್ತು ಕೈಯನ್ನು ತನ್ನ ದವಡೆ ಹಾಗೂ ಪಂಜಗಳ ನಡುವೆ ಬಿಗಿಯಾಗಿ ಕಚ್ಚಿ ಹಿಡಿದುಕೊಂಡಿರುವ ಭಯಾನಕ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನರನ್ನು ಬೆಚ್ಚಿಬೀಳಿಸಿದೆ. ವ್ಯಕ್ತಿ ಸಿಂಹದ ತಲೆ ಸವರುತ್ತರುವುದು ವಿಡಿಯೋದಲ್ಲಿ ಕಾಣಬಹುದು.

ಘಟನೆ ನಡೆದಿದ್ದು ಹೇಗೆ?
ಭಾವನಗರ ಜಿಲ್ಲೆಯ ಪಲಿತಾನ ತಾಲೂಕಿನ ಗರಾಜಿಯಾ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ 8.30 ರ ಸುಮಾರಿಗೆ ಈ ಘಟನೆ ನಡೆದಿದೆ. ಗ್ರಾಮದ ನಿವಾಸಿ ಕಲುಭಾಯ್ ಬೋಘಾಯ್ ಪರ್ಮಾರ್ ಎಂಬುವವರು ತಮ್ಮ ಮನೆಯ ಸಮೀಪ ಹಸುಗಳನ್ನು ಮೇಯಿಸುತ್ತಿದ್ದಾಗ, ಪೊದೆಗಳ ನಡುವಿನಿಂದ ಬಂದ ಸಿಂಹವೊಂದು ಇದ್ದಕ್ಕಿದ್ದಂತೆ ಅವರ ಮೇಲೆ ಎರಗಿದೆ.

ವೈರಲ್ ವಿಡಿಯೋದಲ್ಲಿ ಏನಿದೆ?
ವೈರಲ್ ಆಗಿರುವ ವಿಡಿಯೋದಲ್ಲಿ, ಸಿಂಹವು ಗಂಭೀರವಾಗಿ ಗಾಯಗೊಂಡಿರುವ ಕಲುಭಾಯ್ ಅವರನ್ನು ನೆಲದ ಮೇಲೆ ಮಲಗಿಸಿ ದಾಳಿ ಮಾಡುತ್ತಿರುವುದನ್ನು ಕಾಣಬಹುದು. ಸಿಂಹವು ಅವರ ಒಂದು ಕಾಲನ್ನು ತನ್ನ ಪಂಜಗಳಿಂದ ಬಿಗಿಯಾಗಿ ಹಿಡಿದಿದ್ದರೆ, ಕೈಯನ್ನು ತನ್ನ ದವಡೆಯೊಳಗೆ ಸಿಲುಕಿಸಿಕೊಂಡಿತ್ತು. ಕಲುಭಾಯ್ ಅವರು ತೀವ್ರ ರಕ್ತಸ್ರಾವದಿಂದ ಬಳಲುತ್ತಾ, ಸಿಂಹದ ಹಿಡಿತದಿಂದ ತಪ್ಪಿಸಿಕೊಳ್ಳಲು ಹತಾಶ ಪ್ರಯತ್ನ ನಡೆಸುತ್ತಿರುವುದು ವಿಡಿಯೋದಲ್ಲಿದೆ.

ಮತ್ತಷ್ಟು ಓದಿ: ಯುವತಿ ಮೇಲೆ ಮೊಸಳೆ ಭೀಕರ ದಾಳಿ, ಪ್ರೇಯಸಿಯನ್ನು ಬಚಾವ್ ಮಾಡಲು ಹೋರಾಡಿದ ಪ್ರಿಯಕರ, ಆದ್ರೂ ಉಳೀಲಿಲ್ಲ ಜೀವ

ಪ್ರಾಣ ಪಣಕ್ಕಿಟ್ಟು ರಕ್ಷಿಸಿದ ಗ್ರಾಮಸ್ಥರು
ಘಟನೆಯನ್ನು ಕಂಡು ಗಾಬರಿಗೊಂಡ ಗ್ರಾಮಸ್ಥರು ತಕ್ಷಣವೇ ಸಿಂಹವನ್ನು ಸುತ್ತುವರಿದರು. ಪ್ರಾಣಿಯನ್ನು ಹೆದರಿಸಿ ಓಡಿಸಲು ಎಲ್ಲರೂ ಒಟ್ಟಾಗಿ ಜೋರಾಗಿ ಕೂಗುತ್ತಾ, ಹರಸಾಹಸ ಪಟ್ಟರು. ಗ್ರಾಮಸ್ಥರು ಎಷ್ಟೇ ಕೂಗಾಡಿದರೂ ಸಿಂಹವು ಮಾತ್ರ ಕಲುಭಾಯ್ ಅವರನ್ನು ಬಿಡದೆ ಹಾಗೆಯೇ ಹಿಡಿದುಕೊಂಡಿತ್ತು. ಕೊನೆಗೂ ಗ್ರಾಮಸ್ಥರ ತೀವ್ರ ಪ್ರತಿರೋಧದ ನಂತರ ಸಿಂಹವು ಆತನನ್ನು ಬಿಟ್ಟು ಕಾಡಿನ ಕಡೆಗೆ ಓಡಿದೆ.

ವಿಡಿಯೋ

ಸದ್ಯ ತೀವ್ರವಾಗಿ ಗಾಯಗೊಂಡಿರುವ ಕಲುಭಾಯ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆಯಿಂದಾಗಿ ಸುತ್ತಮುತ್ತಲಿನ ಹಳ್ಳಿಗಳ ಜನರಲ್ಲಿ ಭೀತಿ ಆವರಿಸಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ತನಿಖೆ ಕೈಗೊಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Leave a Reply

Your email address will not be published. Required fields are marked *