Headlines

Viral: ಪ್ರಿಯಕರನಿಗೆ ಗಿಫ್ಟ್ ಕೊಡಲು 2ಲಕ್ಷ ರೂ. ಮೌಲ್ಯದ ವಾಚ್ ಕದ್ದ ಯುವತಿ ಅರೆಸ್ಟ್! – Kannada News | Hyderabad Watch Theft: Girlfriend Steals Rs 2 Lakh Tissot for Boyfriend, Arrested

ಹೈದರಾಬಾದ್: ಪ್ರೀತಿಗಾಗಿ ಏನನ್ನಾದರೂ ಮಾಡಲು ಸಿದ್ಧ ಎನ್ನುವ ಮಾತಿದೆ, ಆದರೆ ಇಲ್ಲೊಬ್ಬಳು ಯುವತಿ ತನ್ನ ಪ್ರಿಯಕರನಿಗೆ ದುಬಾರಿ ಉಡುಗೊರೆ ನೀಡಲು ಹೋಗಿ ಅರೆಸ್ಟ್ ಆಗಿದ್ದಾಳೆ. ನಗರದ ಜುಬಿಲಿ ಹಿಲ್ಸ್‌ನಲ್ಲಿರುವ ಐಷಾರಾಮಿ ಶೋರೂಮ್‌ನಿಂದ ಸುಮಾರು 2 ಲಕ್ಷ ರೂಪಾಯಿ ಮೌಲ್ಯದ ವಾಚ್‌ಗಳನ್ನು ಕಳ್ಳತನ ಮಾಡಿದ ಆರೋಪದ ಮೇಲೆ 26 ವರ್ಷದ ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಆರೋಪಿ ಯುವತಿ ಜುಬಿಲಿ ಹಿಲ್ಸ್‌ನಲ್ಲಿರುವ ಪ್ರತಿಷ್ಠಿತ ವಾಚ್ ಶೋರೂಮ್‌ಗೆ ಗ್ರಾಹಕಿಯಂತೆ ಎಂಟ್ರಿ ಕೊಟ್ಟಿದ್ದಾಳೆ. ತನಗೆ ಒಳ್ಳೆಯ ವಾಚ್‌ಗಳನ್ನು ತೋರಿಸುವಂತೆ ಸಿಬ್ಬಂದಿಯನ್ನು ಕೇಳಿದ್ದಾಳೆ. ಸಿಬ್ಬಂದಿ ವಿವಿಧ ಮಾದರಿಗಳನ್ನು ತೋರಿಸುತ್ತಿದ್ದಾಗ, ಯಾರಿಗೂ ಸಂಶಯ ಬರದಂತೆ ಸುಮಾರು ತಲಾ 1 ಲಕ್ಷ ರೂಪಾಯಿ ಮೌಲ್ಯದ ಎರಡು ‘ಟಿಸ್ಸೋಟ್’ (Tissot) ವಾಚ್‌ಗಳನ್ನು ಸದ್ದಿಲ್ಲದೆ ತನ್ನ ಬ್ಯಾಗ್‌ನಲ್ಲಿ ಅಡಗಿಸಿಟ್ಟುಕೊಂಡಿದ್ದಾಳೆ. ನಂತರ ಏನೂ ತಿಳಿಯದವಳಂತೆ ಅಲ್ಲಿಂದ ಕಾಲ್ಕಿತ್ತಿದ್ದಾಳೆ.

ಸಿಸಿಟಿವಿಯಲ್ಲಿ ಯುವತಿಯ ಕೈಚಳಕ ಬಯಲು:

ವಾಚ್‌ಗಳು ನಾಪತ್ತೆಯಾಗಿರುವುದು ಗಮನಕ್ಕೆ ಬರುತ್ತಿದ್ದಂತೆ ಶೋರೂಮ್ ಸಿಬ್ಬಂದಿ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ. ಈ ವೇಳೆ ಯುವತಿಯ ಕೈಚಳಕ ಬಯಲಾಗಿದೆ. ತಕ್ಷಣವೇ ಜುಬಿಲಿ ಹಿಲ್ಸ್ ಪೊಲೀಸರಿಗೆ ದೂರು ನೀಡಲಾಗಿದ್ದು, ಕಾರ್ಯಾಚರಣೆ ಆರಂಭಿಸಿದ ಪೊಲೀಸರು ಆಕೆ ಬಂದಿದ್ದ ಕಾರಿನ ನಂಬರ್ ಪ್ಲೇಟ್ ಆಧರಿಸಿ ತನಿಖೆ ಚುರುಕುಗೊಳಿಸಿದರು.

ಮತ್ತಷ್ಟು ಓದಿ: Video: ಮಹಾರಾಷ್ಟ್ರ ಪೊಲೀಸ್ ಪಡೆಗೆ ಸೇರ್ಪಡೆಯಾದ ಖುಷಿ, ತಂದೆಯನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ ಮಗಳು

ಖಮ್ಮಂನಲ್ಲಿ ಸಿಕ್ಕಿಬಿದ್ದ ಪ್ರೇಮಿಗಳು:

ಆರೋಪಿ ಯುವತಿ ಖಮ್ಮಂ ಜಿಲ್ಲೆಯಲ್ಲಿದ್ದಾಳೆ ಎಂದು ಪೊಲೀಸರು ಪತ್ತೆ ಹಚ್ಚಿದ್ದಾರೆ. ಅಲ್ಲಿಗೆ ತೆರಳಿದ ಪೊಲೀಸ್ ತಂಡ ಯುವತಿ ಮತ್ತು ಆಕೆಯ ಪ್ರಿಯಕರನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ತನ್ನ ಪ್ರಿಯಕರನಿಗೆ ದುಬಾರಿ ಉಡುಗೊರೆ ನೀಡುವ ಸಲುವಾಗಿಯೇ ಆಕೆ ಈ ಕಳ್ಳತನ ಎಸಗಿದ್ದಾಳೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಸದ್ಯ ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದಿದ್ದು, ಕಳ್ಳತನದ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 11:19 am, Thu, 16 April 26

Source link

Leave a Reply

Your email address will not be published. Required fields are marked *