Viral Video: ತರಗತಿಯಲ್ಲೇ ಮಲಗಿ ವಿದ್ಯಾರ್ಥಿನಿಯಿಂದ ಮಸಾಜ್ ಮಾಡಿಸಿಕೊಂಡ ಶಿಕ್ಷಕಿ; ವಿಡಿಯೋ ವೈರಲ್

Viral Video: ತರಗತಿಯಲ್ಲೇ ಮಲಗಿ ವಿದ್ಯಾರ್ಥಿನಿಯಿಂದ ಮಸಾಜ್ ಮಾಡಿಸಿಕೊಂಡ ಶಿಕ್ಷಕಿ; ವಿಡಿಯೋ ವೈರಲ್

ಚಿತ್ರಕೂಟ (ಉತ್ತರ ಪ್ರದೇಶ): ಶಾಲೆ ಕೇವಲ ಅಕ್ಷರ ಕಲಿಸುವ ಜಾಗವಲ್ಲ, ಬದಲಾಗಿ ಜ್ಞಾನ ಮತ್ತು ಸಂಸ್ಕಾರವನ್ನು ನೀಡುವ ಪವಿತ್ರ ಸ್ಥಳ. ಇದು ವಿದ್ಯಾರ್ಥಿಗಳಲ್ಲಿ ಶಿಸ್ತು, ಮೌಲ್ಯಗಳು ಮತ್ತು ಒಳ್ಳೆಯ ನಡತೆಯನ್ನು ಬೆಳೆಸುವ ಭವಿಷ್ಯದ ಬುನಾದಿ. ಆದರೆ ಇಂತಹ ಜ್ಞಾನದ ದೇಗುಲದಲ್ಲೇ ಶಿಕ್ಷಕಿಯೊಬ್ಬಳು ತನ್ನ ಅಧಿಕಾರವನ್ನೇ ದುರ್ಬಳಕೆ ಮಾಡಿಕೊಂಡು ಪುಟ್ಟ ವಿದ್ಯಾರ್ಥಿನಿಯಿಂದ ಮಸಾಜ್ ಮಾಡಿಸಿಕೊಂಡಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್​ ಮಿಡಿಯಾಗಳಲ್ಲಿ ವೈರಲ್​ ಆಗಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ.

ಏನಿದು ಘಟನೆ?

ಚಿತ್ರಕೂಟ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯೊಂದರಲ್ಲಿ ಈ ನಾಚಿಕೆಗೇಡಿನ ಘಟನೆ ನಡೆದಿದೆ. ಶಾಲೆಯ ಮುಖ್ಯೋಪಾಧ್ಯಾಯಿನಿಯಾಗಿರುವ ಮಧು ರೈ, ಪಾಠ ಮಾಡುವ ಬದಲು, ತರಗತಿಯಲ್ಲಿ ವಿದ್ಯಾರ್ಥಿನಿಯೊಬ್ಬಳಿಂದ ಮಸಾಜ್ ಮಾಡಿಸಿಕೊಂಡಿದ್ದಾಳೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ, ಶಿಕ್ಷಕಿ ಮಧು ರೈ ತರಗತಿಯ ನೆಲದ ಮೇಲೆ ಮಲಗಿದ್ದು, ಸುತ್ತ ಇರುವ ಪುಟ್ಟ ಬಾಲಕಿಯರು ಶಿಕ್ಷಕಿಯ ಕಾಲುಗಳನ್ನು ಒತ್ತುತ್ತಿರುವ ದೃಶ್ಯ ಸೆರೆಯಾಗಿದೆ. ಜ್ಞಾನದ ದೀಪ ಬೆಳಗಬೇಕಾದ ಗುರುವೇ, ಮಕ್ಕಳನ್ನು ಇಂತಹ ಕೀಳು ಕೆಲಸಗಳಿಗೆ ಬಳಸಿಕೊಂಡಿರುವುದು ಪೋಷಕರು ಮತ್ತು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಶಂಖನಾದವು ಕಿವಿಗೆ ಬೀಳುತ್ತಿದ್ದಂತೆ ಗೋಶಾಲೆಯತ್ತ ಓಡೋಡಿ ಬಂದ ಹಸುಗಳು

ಶಿಕ್ಷಣ ಇಲಾಖೆಯ ಕ್ರಮ:
ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆಯೇ ಎಚ್ಚೆತ್ತುಕೊಂಡಿರುವ ಶಿಕ್ಷಣ ಇಲಾಖೆ, ಕೂಡಲೇ ತನಿಖೆಗೆ ಆದೇಶಿಸಿದೆ. ಚಿತ್ರಕೂಟದ ಜಿಲ್ಲಾ ಮೂಲ ಶಿಕ್ಷಣಾಧಿಕಾರಿಗಳು (BSA) ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, ಮುಖ್ಯೋಪಾಧ್ಯಾಯಿನಿಯನ್ನು ಅಮಾನತುಗೊಳಿಸಲು ಮುಂದಾಗಿರುವುದು ವರದಿಯಾಗಿದೆ.

“ಶಿಕ್ಷಣ ಸಂಸ್ಥೆಗಳಲ್ಲಿ ಇಂತಹ ಘಟನೆಗಳು ನಡೆಯುವುದು ಶಿಕ್ಷಕ ವೃತ್ತಿಗೇ ಅವಮಾನ. ವಿದ್ಯಾರ್ಥಿಗಳ ಮೇಲೆ ಇಂತಹ ಒತ್ತಡ ಹೇರುವುದು ಶಿಕ್ಷಣ ಇಲಾಖೆಯ ನಿಯಮಗಳ ಸ್ಪಷ್ಟ ಉಲ್ಲಂಘನೆ,” ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಒಟ್ಟಿನಲ್ಲಿ, ಶಾಲೆಗೆ ವಿದ್ಯೆಯನ್ನು ಕಲಿಯಲು ಬರುವ ಮಕ್ಕಳನ್ನು ಅಸಹಾಯಕತೆಯಿಂದ ತಮ್ಮ ಸೇವಕರಂತೆ ನಡೆಸಿಕೊಂಡ ಶಿಕ್ಷಕಿಯ ವರ್ತನೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಖಂಡನೆ ವ್ಯಕ್ತವಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *