IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 57ನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ (Virat Kohli) ಭರ್ಜರಿ ಶತಕ ಸಿಡಿಸಿದ್ದಾರೆ. ಕೆಕೆಆರ್ ವಿರುದ್ಧದ ಈ ಶತಕದೊಂದಿಗೆ ಕಿಂಗ್ ಕೊಹ್ಲಿ ಹಲವು ದಾಖಲೆಗಳನ್ನು ಬರೆದಿದ್ದಾರೆ. ಈ ದಾಖಲೆಗಳ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ…
- ಅತಿ ಹೆಚ್ಚು ಐಪಿಎಲ್ ಶತಕಗಳು: ವಿರಾಟ್ ಕೊಹ್ಲಿ ತಮ್ಮ ಐಪಿಎಲ್ ವೃತ್ತಿಜೀವನದ 9ನೇ ಶತಕ ಪೂರೈಸುವ ಮೂಲಕ ಈ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದ್ದಾರೆ. ಜೋಸ್ ಬಟ್ಲರ್ (7) ಮತ್ತು ಕ್ರಿಸ್ ಗೇಲ್ (6) ನಂತರದ ಸ್ಥಾನಗಳಲ್ಲಿದ್ದಾರೆ.
- 14,000 ರನ್: ಟಿ20 ಕ್ರಿಕೆಟ್ ಇತಿಹಾಸದಲ್ಲಿ 14,000 ರನ್ ಗಡಿಯನ್ನು ದಾಟಿದ ವಿಶ್ವದ 6ನೇ ಮತ್ತು ಭಾರತದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
- ವಿಶ್ವ ದಾಖಲೆ: ಕೇವಲ 409 ಇನ್ನಿಂಗ್ಸ್‌ಗಳಲ್ಲಿ 14 ಸಾವಿರ ರನ್ ಪೂರೈಸಿ ವಿರಾಟ್ ಕೊಹ್ಲಿ ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಕ್ರಿಸ್ ಗೇಲ್ (423 ಇನ್ನಿಂಗ್ಸ್) ಹೆಸರಿನಲ್ಲಿತ್ತು.
- ಐಪಿಎಲ್ ಪಂದ್ಯಗಳ ದಾಖಲೆ: ಇದು ವಿರಾಟ್ ಕೊಹ್ಲಿ ಆಡಿದ 279ನೇ ಐಪಿಎಲ್ ಪಂದ್ಯವಾಗಿದ್ದು, ಎಂ.ಎಸ್. ಧೋನಿ ಮತ್ತು ರೋಹಿತ್ ಶರ್ಮಾ (ತಲಾ 278 ಪಂದ್ಯ) ಅವರ ದಾಖಲೆಯನ್ನು ಮೀರಿ ಅತಿ ಹೆಚ್ಚು ಐಪಿಎಲ್ ಪಂದ್ಯ ಆಡಿದ ಆಟಗಾರ ಎನಿಸಿಕೊಂಡಿದ್ದಾರೆ.
- 400+ ರನ್ಸ್: ಐಪಿಎಲ್ ಇತಿಹಾಸದಲ್ಲಿ ಬರೋಬ್ಬರಿ 12 ಸೀಸನ್‌ಗಳಲ್ಲಿ 400ಕ್ಕೂ ಹೆಚ್ಚು ರನ್ ಗಳಿಸಿದ ಏಕೈಕ ಬ್ಯಾಟರ್ ಎಂಬ ದಾಖಲೆಯನ್ನು ಕೂಡ ಕಿಂಗ್ ಕೊಹ್ಲಿ ಬರೆದಿದ್ದಾರೆ.
- ಪಂದ್ಯ ಶ್ರೇಷ್ಠ ದಾಖಲೆ: ಐಪಿಎಲ್‌ನಲ್ಲಿ ತಮ್ಮ 21ನೇ ಪಂದ್ಯ ಶ್ರೇಷ್ಠ (POTM) ಪ್ರಶಸ್ತಿ ಗೆಲ್ಲುವ ಮೂಲಕ ರೋಹಿತ್ ಶರ್ಮಾ ಅವರ ದಾಖಲೆಯನ್ನು ವಿರಾಟ್ ಕೊಹ್ಲಿ ಸರಿಗಟ್ಟಿದ್ದಾರೆ.
- ಚೇಸ್ ಮಾಸ್ಟರ್: ಐಪಿಎಲ್‌ನ ಸೆಕೆಂಡ್ ಇನಿಂಗ್ಸ್ನಲ್ಲಿ ವಿರಾಟ್ ಕೊಹ್ಲಿ ಸಿಡಿಸಿದ 3ನೇ ಶತಕ ಇದಾಗಿದ್ದು, ಈ ಮೂಲಕ ಜೋಸ್ ಬಟ್ಲರ್ ಅವರ ದಾಖಲೆಯನ್ನು ಸಮಗಟ್ಟಿದ್ದಾರೆ.
- 10 ಟಿ20 ಶತಕ: ಒಟ್ಟಾರೆ ಟಿ20 ಮಾದರಿಯಲ್ಲಿ ಇದು ವಿರಾಟ್ ಕೊಹ್ಲಿಯ 10 ಸೆಂಚುರಿ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಎರಡಂಕಿ ಸೆಂಚುರಿ ಸಿಡಿಸಿದ ಏಕೈಕ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.
- ಅತಿ ಹೆಚ್ಚು 50+ ಸ್ಕೋರ್: ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ಐಪಿಎಲ್‌ನಲ್ಲಿ 9ನೇ ಬಾರಿಗೆ 50ಕ್ಕೂ ಹೆಚ್ಚು ರನ್ ಗಳಿಸಿ ರೋಹಿತ್ ಶರ್ಮಾ ಹಾಗೂ ಡೇವಿಡ್ ವಾರ್ನರ್ ಅವರ ದಾಖಲೆಯನ್ನು ಬ್ರೇಕ್ ಮಾಡಿದ್ದಾರೆ.
- ಗರಿಷ್ಠ ವೈಯಕ್ತಿಕ ಸ್ಕೋರ್: ಈ ಪಂದ್ಯದಲ್ಲಿ ಅಜೇಯ 105 ರನ್ ಬಾರಿಸಿ ರಾಯ್‌ಪುರದ ಮೈದಾನದಲ್ಲಿ ಟಿ20 ಪಂದ್ಯವೊಂದರಲ್ಲಿ ಗರಿಷ್ಠ ವೈಯುಕ್ತಿಕ ಸ್ಕೋರ್ಗಳಿಸಿದ ಬ್ಯಾಟರ್ ಎಂಬ ದಾಖಲೆಯನ್ನು ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ.
- ಡಕ್ ಟು ಸೆಂಚುರಿ: ಸತತ ಎರಡು ಪಂದ್ಯಗಳಲ್ಲಿ ಶೂನ್ಯಕ್ಕೆ (0) ಔಟಾದ ಬೆನ್ನಲ್ಲೇ ಮುಂದಿನ ಪಂದ್ಯದಲ್ಲಿ ಶತಕ ಬಾರಿಸಿದ ಐಪಿಎಲ್‌ನ ಮೊದಲ ಬ್ಯಾಟರ್ ಎಂಬ ದಾಖಲೆಯನ್ನೂ ಕೂಡ ವಿರಾಟ್ ಕೊಹ್ಲಿ ಮುಡಿಗೇರಿಸಿಕೊಂಡಿದ್ದಾರೆ.
ಇದನ್ನೂ ಓದಿ: ಮೈದಾನದಲ್ಲಿ ದೇವದತ್ ಪಡಿಕ್ಕಲ್ಗೆ ಸಿಕ್ಕಿದ ಚಿನ್ನದ ಸರ ಯಾರದ್ದು ಗೊತ್ತಾ?
ಒಟ್ಟಾರೆಯಾಗಿ ಹೇಳುವುದಾದರೆ, ಸತತ ಎರಡು ಪಂದ್ಯಗಳಲ್ಲಿ ಶೂನ್ಯಕ್ಕೆ ಔಟಾಗಿದ್ದರೂ, ಕಂಬ್ಯಾಕ್ ಮಾಡಿ ಒಂದೇ ಇನ್ನಿಂಗ್ಸ್‌ನಲ್ಲಿ ವಿಶ್ವದ ಘಟಾನುಘಟಿ ದಾಖಲೆಗಳನ್ನು ಧೂಳೀಪಟ ಮಾಡಿರುವುದು ‘ಕಿಂಗ್ ಕೊಹ್ಲಿ’ ಸಾಮರ್ಥ್ಯಕ್ಕೆ ಸಾಕ್ಷಿ. ಈ ಐತಿಹಾಸಿಕ ಶತಕ ಕ್ರಿಕೆಟ್ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಉಳಿಯುವುದರಲ್ಲಿ ಅನುಮಾನವಿಲ್ಲ.
Published On – 2:04 pm, Thu, 14 May 26
