Weather Report : ಕರಾವಳಿ ಮತ್ತು ಮಲೆನಾಡಿನಲ್ಲಿ ಭಾರೀ ಮಳೆ; ‘ರೆಡ್ ಅಲರ್ಟ್’ ಘೋಷಣೆ – Kannada News | Karnataka monsoon heavy rain alert for coastal and malnad bengaluru rain update

ಬೆಂಗಳೂರು, ಜು.9: ರಾಜ್ಯದಲ್ಲಿ ನೈಋತ್ಯ ಮುಂಗಾರು ಮಾರುತಗಳು ಭಾರಿ ಚುರುಕಾಗಿದ್ದು, ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡು ಭಾಗದಲ್ಲಿ ವರುಣನ ಆರ್ಭಟ ಜೋರಾಗಿದೆ ಎಂದು ಹವಮಾನಾ ಇಲಾಖೆ ಎಚ್ಚರಿಕೆಯನ್ನು ನೀಡಿದೆ. ಬೆಂಗಳೂರಿನ ಹಲವು ಕಡೆ ಇಂದು ಗಾಳಿ- ಮಳೆ ಇರಲಿದೆ ಎಂದು ಹೇಳಲಾಗಿದೆ. ಕರಾವಳಿ ಭಾಗದಲ್ಲೂ ಹೆಚ್ಚು ಮಳೆಯಾಗಿದೆ ಎಂದು ಹೇಳಿದೆ. ಆದರೆ ಯಾವ ಜಿಲ್ಲೆಗಳಿಗೂ ಶಾಲೆ ರಜೆಯನ್ನು ಘೋಷಣೆ ಮಾಡಿಲ್ಲ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಇಂದ ಅತಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಘಾಟ್ ಪ್ರದೇಶಗಳಲ್ಲಿ ಗುಡ್ಡ ಕುಸಿತದ ಭೀತಿ ಇರುವುದರಿಂದ ಸಾರ್ವಜನಿಕರು ಹಾಗೂ ಪ್ರವಾಸಿಗರು ಜಾಗರೂಕರಾಗಿರಲು ಇಲಾಖೆ ಸೂಚಿಸಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರುವುದರಿಂದ ಮೀನುಗಾರರು ಕಡಲಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ರಾಜಧಾನಿ ಬೆಂಗಳೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಇಂದು ಮೋಡಕವಿದ ವಾತಾವರಣ ಮುಂದುವರಿಯಲಿದ್ದು, ನಗರದಾದ್ಯಂತ ತಂಪು ಗಾಳಿ ಬೀಸಲಿದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ನಗರದ ಹಲವು ಭಾಗಗಳಲ್ಲಿ ಸಾಧಾರಣದಿಂದ ಜಿಟಿ ಜಿಟಿ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿರಲಿದೆ.

ಇದನ್ನೂ ಓದಿ: ಮಳೆಯಲ್ಲಿ ನೆನೆಯಲು ಇಷ್ಟವಿದ್ದರೆ ಈ ವಿಷಯಗಳನ್ನು ತಿಳಿದುಕೊಂಡು ಆರೋಗ್ಯ ಕಾಪಾಡಿಕೊಳ್ಳಿ

ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಇನ್ನು ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ತುಮಕೂರು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *