Headlines

West Bengal CM oath ceremony: ಬಂಗಾಳದಲ್ಲಿ ಬಿಜೆಪಿ ಯುಗ ಆರಂಭ; ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣವಚನ ಸ್ವೀಕಾರ – Kannada News | Suvendu Adhikari takes oath as the first BJP Chief Minister of West Bengal with PM Modi Presence

ಕೊಲ್ಕತ್ತಾ, ಮೇ 9: ಪಶ್ಚಿಮ ಬಂಗಾಳದ (West Bengal) ಕೊಲ್ಕತ್ತಾ ಇಂದು ಕೇಸರಿಮಯವಾಗಿದೆ. ರಾಜ್ಯದಲ್ಲಿ ಮೊದಲ ಬಾರಿಗೆ ಬಿಜೆಪಿ ಸರ್ಕಾರ ರಚನೆಯಾಗಿದೆ. ಹೀಗಾಗಿ, ಪ್ರಧಾನಿ ನರೇಂದ್ರ ಮೋದಿಯಿಂದ (PM Modi in Kolkata) ಹಿಡಿದು ವಿವಿಧ ರಾಜ್ಯಗಳ ಬಿಜೆಪಿ ಮುಖ್ಯಮಂತ್ರಿಗಳವರೆಗೆ ಅನೇಕ ನಾಯಕರು ಕೊಲ್ಕತ್ತಾಕ್ಕೆ ಆಗಮಿಸಿದ್ದಾರೆ. ಇದೀಗ ಬಿಜೆಪಿ ಹಿರಿಯ ನಾಯಕರ ಹಾಗೂ ಬೆಂಬಲಿಗರ ಸಮ್ಮುಖದಲ್ಲಿ ಸುವೇಂದು ಅಧಿಕಾರಿ (Suvendu Adhikari) ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಈ ಅದ್ದೂರಿ ಸಮಾರಂಭವು ಕೋಲ್ಕತ್ತಾದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು NDAಯ ಹಲವಾರು ಹಿರಿಯ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ನೊಬೆಲ್ ಪ್ರಶಸ್ತಿ ವಿಜೇತ ರವೀಂದ್ರನಾಥ ಟ್ಯಾಗೋರ್ ಅವರ ಜನ್ಮ ದಿನಾಚರಣೆಯಾದ ಇಂದೇ ನೂತನ ಮುಖ್ಯಮಂತ್ರಿಯ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆದಿದೆ.

ಇದನ್ನೂ ಓದಿ: Live: ಬಂಗಾಳದಲ್ಲಿ ಬಿಜೆಪಿ ಸರ್ಕಾರದ ಅಸ್ತಿತ್ವಕ್ಕೆ; ಪ್ರಮಾಣವಚನ ಸ್ವೀಕಾರ ನೇರ ಪ್ರಸಾರ

ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಸುವೇಂದು ಅಧಿಕಾರಿ ಅವರ ಹೆಸರನ್ನು ಪಕ್ಷದ ಕಾರ್ಯಕರ್ತರು ಮತ್ತು ಶಾಸಕರ ಮುಂದೆ ಘೋಷಿಸಿದರು. ಬಂಗಾಳದಲ್ಲಿ ಹೊಸ ಸರ್ಕಾರವನ್ನು ಮುನ್ನಡೆಸಲು ಬಿಜೆಪಿ ಶಾಸಕಾಂಗ ಪಕ್ಷವು ಸುವೇಂದು ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಿದೆ ಎಂದು ಹೇಳಿದರು.

ಇದನ್ನೂ ಓದಿ: ಬಂಗಾಳದಲ್ಲಿ ಹೊಸ ಇತಿಹಾಸ: ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಇಂದು ಪ್ರಮಾಣ ವಚನ

ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಕೂಡಲೇ ಅಧಿಕಾರಿ ಅವರು ಲೋಕ ಭವನದಲ್ಲಿ ರಾಜ್ಯಪಾಲ ಆರ್.ಎನ್ ರವಿ ಅವರನ್ನು ಭೇಟಿ ಮಾಡಿ ಸರ್ಕಾರ ರಚಿಸಲು ಔಪಚಾರಿಕವಾಗಿ ಹಕ್ಕು ಮಂಡಿಸಿದರು. 2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ, ಬಿಜೆಪಿ 207 ಸ್ಥಾನಗಳನ್ನು ಗಳಿಸುವ ಮೂಲಕ ಸ್ಪಷ್ಟ ಬಹುಮತ ಗಳಿಸಿತು. ತೃಣಮೂಲ ಕಾಂಗ್ರೆಸ್ (ಟಿಎಂಸಿ) 80 ಸ್ಥಾನಗಳನ್ನು ಗೆದ್ದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಟಿಎಂಸಿಯ 15 ವರ್ಷಗಳ ಆಡಳಿತ ಅಂತ್ಯವಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 11:36 am, Sat, 9 May 26

Source link

Leave a Reply

Your email address will not be published. Required fields are marked *