ಕೋಲ್ಕತ್ತಾ, ಏಪ್ರಿಲ್ 29: ಪಶ್ಚಿಮ ಬಂಗಾಳ(West Bengal)ದ ಹದಿನಾರನೇ ವಿಧಾನಸಭೆ ಚುನಾವಣೆಯ ಅಬ್ಬರದ ಪ್ರಚಾರಕ್ಕೆ ತೆರೆ ಬಿದ್ದಿದ್ದು, ಈಗ ಎಲ್ಲರ ಕಣ್ಣು ಇಂದಿನ ಮತದಾನದ ಮೇಲೆ ನೆಟ್ಟಿದೆ. 142 ಕ್ಷೇತ್ರಗಳಲ್ಲಿ ನಡೆಯಲಿರುವ ಈ ಅಂತಿಮ ಹಂತದ ಚುನಾವಣೆಯು ರಾಜ್ಯದ ಮುಂದಿನ ಸರ್ಕಾರ ಯಾರದ್ದು ಎಂಬುದನ್ನು ನಿರ್ಧರಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ.
ಪ್ರಚಾರದ ಅಂತಿಮ ದಿನದಂದು ಉತ್ತರ 24 ಪರಗಣದ ಜಗತ್‌ದಲ್‌ನಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿಯ ಗೆಲುವಿನ ಬಗ್ಗೆ ಅಚಲ ವಿಶ್ವಾಸ ವ್ಯಕ್ತಪಡಿಸಿದ್ದರು. ಮುಂದಿನ ತಿಂಗಳು ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಲು ನಾನು ಖಂಡಿತ ಮತ್ತೆ ಬರುತ್ತೇನೆ ಎಂದು ಹೇಳುವ ಮೂಲಕ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದರು.
142 ಕ್ಷೇತ್ರಗಳಿದ್ದು ಅದರಲ್ಲಿ ನಾಡಿಯಾ, ಪುರ್ಬಾ ಬರ್ಧಮಾನ್, ಹೌರಾ, ಹೂಗ್ಲಿ, ಕೋಲ್ಕತ್ತಾ ಸೇರಿ 7 ಜಿಲ್ಲೆಗಳಿವೆ. ಒಟ್ಟು 1,448 ಮಂದಿ ಕಣದಲ್ಲಿದ್ದಾರೆ. 3.21 ಕೋಟಿಗೂ ಹೆಚ್ಚು ಮತದಾರರು ಅರ್ಹರಾಗಿದ್ದಾರೆ ಅದರಲ್ಲಿ 1.64 ಕೋಟಿ ಪುರುಷರು, 1.57 ಕೋಟಿ ಮಹಿಳೆಯರು ಮತ್ತು 792 ತೃತೀಯ ಲಿಂಗಿಗಳಿದ್ದಾರೆ.
ಮತ್ತಷ್ಟು ಓದಿ: Video: ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಮೊದಲ ಹಂತದ ಚುನಾವಣೆಯಲ್ಲಿ (ಏಪ್ರಿಲ್ 23) ದಾಖಲೆಯ ಶೇ. 93.19 ರಷ್ಟು ಮತದಾನವಾಗಿದ್ದು, ಅದನ್ನು ಮೀರಿಸುವ ಉತ್ಸಾಹ ಎರಡನೇ ಹಂತದಲ್ಲಿ ಕಂಡುಬರುತ್ತಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಕೇಂದ್ರ ಪಡೆಗಳ 2,407 ಕಂಪನಿಗಳನ್ನು ನಿಯೋಜಿಸಲಾಗಿದೆ. ರಾಜ್ಯ ಮತ್ತು ಕೋಲ್ಕತ್ತಾ ಪೊಲೀಸರು ಕೂಡ ಬಿಗಿ ಭದ್ರತೆಯಲ್ಲಿ ಭಾಗಿಯಾಗಿದ್ದಾರೆ.
#WATCH | West Bengal Elections 2026 | People form queues at a polling station in Baranagar, North 24 Parganas. Voting for the second and final phase of the state assembly elections. pic.twitter.com/RN8bfcHD5c
— ANI (@ANI) April 29, 2026
ಭ್ರಷ್ಟಾಚಾರ, ಮಹಿಳಾ ಸುರಕ್ಷತೆ ಮತ್ತು ಕೈಗಾರಿಕೆಗಳ ಕುಸಿತದ ಬಗ್ಗೆ ಮಮತಾ ಬ್ಯಾನರ್ಜಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಬಿಜೆಪಿಯ ಆಜ್ಞೆಯಂತೆ ಚುನಾವಣಾ ಆಯೋಗ ಕೆಲಸ ಮಾಡುತ್ತಿದೆ ಎಂದು ಆರೋಪಿಸಿತು. ಅಲ್ಲದೆ, ಸುಮಾರು ಒಂದು ಕೋಟಿ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ ಎಂಬ ಗಂಭೀರ ಆರೋಪವನ್ನೂ ಮಾಡಿದೆ. ತೃಣಮೂಲ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಆಂತರಿಕ ಒಪ್ಪಂದವಿದೆ ಎಂದು ಆರೋಪಿಸಿ ಎರಡೂ ಪಕ್ಷಗಳ ವಿರುದ್ಧ ಕಿಡಿಕಾರಿವೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
