Headlines

Women’s T20 World Cup 2026: ಇಂದಿನಿಂದ ಟಿ20 ವಿಶ್ವಕಪ್ ಆರಂಭ; ಮೊದಲ ಪಂದ್ಯ ಎಷ್ಟು ಗಂಟೆಗೆ ಆರಂಭ? – Kannada News | 2026 Women’s T20 World Cup: Eng vs SL Opener! Live Stream, Squads and Match Details

2026 ರ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಇಂದಿನಿಂದ ಅಂದರೆ ಜೂನ್ 12 ರಿಂದ ಆರಂಭವಾಗುತ್ತಿದೆ. ಇಂಗ್ಲೆಂಡ್‌ ಆತಿಥ್ಯದಲ್ಲಿ ನಡೆಯುತ್ತಿರುವ ಈ ಟೂರ್ನಿಯಲ್ಲಿ 12 ತಂಡಗಳು ಭಾಗವಹಿಸುತ್ತಿದ್ದು, 24 ದಿನಗಳ ಕಾಲ ನಡೆಯುವ ಈ ಪಂದ್ಯಾವಳಿಯಲ್ಲಿ ಫೈನಲ್ ಪಂದ್ಯವೂ ಸೇರಿದಂತೆ ಒಟ್ಟು 33 ಪಂದ್ಯಗಳು ನಡೆಯಲಿವೆ. ಉದ್ಘಾಟನಾ ಪಂದ್ಯದಲ್ಲಿ ಬಿ ಗುಂಪಿನಲ್ಲಿರುವ ಆತಿಥೇಯ ಇಂಗ್ಲೆಂಡ್ ಮತ್ತು ಶ್ರೀಲಂಕಾ ಮುಖಾಮುಖಿಯಾಗುತ್ತಿವೆ. ಆತಿಥೇಯ ಇಂಗ್ಲೆಂಡ್‌, ಈ ಟೂರ್ನಿ ಆರಂಭಕ್ಕೂ ಮುನ್ನ ನಡೆದ ಟೀಂ ಇಂಡಿಯಾ ವಿರುದ್ಧದ ಟಿ20 ಸರಣಿಯನ್ನು ಗೆದ್ದುಕೊಂಡಿದ್ದು, ಇದೀಗ ಅದೇ ಗೆಲುವಿನ ಸರಣಿಯನ್ನು ಮುಂದುವರೆಸಲು ನೋಡುತ್ತಿದೆ. ಇತ್ತ ಲಂಕಾ ಪಡೆ ಗೆಲುವಿನೊಂದಿಗೆ ಪಂದ್ಯಾವಳಿಯನ್ನು ಆರಂಭಿಸುವ ಇರಾದೆಯಲ್ಲಿದೆ.

ಇಂಗ್ಲೆಂಡ್-ಶ್ರೀಲಂಕಾ ಮುಖಾಮುಖಿ ದಾಖಲೆ

ಇಂಗ್ಲೆಂಡ್ ಮತ್ತು ಶ್ರೀಲಂಕಾ ನಡುವಿನ ಕೊನೆಯ ಟಿ20 ಪಂದ್ಯವು 2023 ರಲ್ಲಿ ನಡೆದಿತ್ತು. ಆಗ ಶ್ರೀಲಂಕಾ ಇಂಗ್ಲೆಂಡ್ ತಂಡವನ್ನು ಸೋಲಿಸಿತ್ತು. ಇನ್ನು ಟಿ20 ಕ್ರಿಕೆಟ್ ಇತಿಹಾಸದಲ್ಲಿ, ಇಂಗ್ಲೆಂಡ್ ಮತ್ತು ಶ್ರೀಲಂಕಾ ಮಹಿಳಾ ತಂಡಗಳು ಒಟ್ಟು 12 ಪಂದ್ಯಗಳನ್ನು ಆಡಿವೆ. ಈ 12 ಪಂದ್ಯಗಳಲ್ಲಿ ಇಂಗ್ಲೆಂಡ್ 10 ಪಂದ್ಯಗಳಲ್ಲಿ ಶ್ರೀಲಂಕಾವನ್ನು ಸೋಲಿಸಿದರೆ, ಇತ್ತ ಶ್ರೀಲಂಕಾ ಕೇವಲ 2 ಪಂದ್ಯಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ.

ಇಂಗ್ಲೆಂಡ್ ಹಾಗೂ ಶ್ರೀಲಂಕಾ ನಡುವೆ ಟಿ20 ವಿಶ್ವಕಪ್ ಉದ್ಘಾಟನಾ ಪಂದ್ಯ ಯಾವಾಗ ನಡೆಯಲಿದೆ?

ಇಂಗ್ಲೆಂಡ್ ಹಾಗೂ ಶ್ರೀಲಂಕಾ ನಡುವೆ ಟಿ20 ವಿಶ್ವಕಪ್ ಉದ್ಘಾಟನಾ ಪಂದ್ಯ ಜೂನ್ 12 ರ ಶುಕ್ರವಾರದಂದು ನಡೆಯಲಿದೆ.

ಇಂಗ್ಲೆಂಡ್ ಹಾಗೂ ಶ್ರೀಲಂಕಾ ನಡುವೆ ಟಿ20 ವಿಶ್ವಕಪ್ ಉದ್ಘಾಟನಾ ಪಂದ್ಯ ಎಲ್ಲಿ ನಡೆಯಲಿದೆ?

ಇಂಗ್ಲೆಂಡ್ ಹಾಗೂ ಶ್ರೀಲಂಕಾ ನಡುವೆ ಟಿ20 ವಿಶ್ವಕಪ್ ಉದ್ಘಾಟನಾ ಪಂದ್ಯ ಬರ್ಮಿಂಗ್ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯುತ್ತಿದೆ.

ಇಂಗ್ಲೆಂಡ್ ಹಾಗೂ ಶ್ರೀಲಂಕಾ ನಡುವೆ ಟಿ20 ವಿಶ್ವಕಪ್ ಉದ್ಘಾಟನಾ ಪಂದ್ಯ ಎಷ್ಟು ಗಂಟೆಗೆ ಪ್ರಾರಂಭವಾಗುತ್ತದೆ?

ಇಂಗ್ಲೆಂಡ್ ಹಾಗೂ ಶ್ರೀಲಂಕಾ ನಡುವೆ ಟಿ20 ವಿಶ್ವಕಪ್ ಉದ್ಘಾಟನಾ ಪಂದ್ಯ ಭಾರತೀಯ ಕಾಲಮಾನ ರಾತ್ರಿ 11 ಗಂಟೆಗೆ ಆರಂಭವಾಗಲಿದ್ದು, ಟಾಸ್ ಬೆಳಿಗ್ಗೆ 10:30 ಕ್ಕೆ ನಡೆಯಲಿದೆ.

ಇಂಗ್ಲೆಂಡ್ ಹಾಗೂ ಶ್ರೀಲಂಕಾ ನಡುವೆ ಟಿ20 ವಿಶ್ವಕಪ್ ಉದ್ಘಾಟನಾ ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?

ಇಂಗ್ಲೆಂಡ್ ಹಾಗೂ ಶ್ರೀಲಂಕಾ ನಡುವೆ ಟಿ20 ವಿಶ್ವಕಪ್ ಉದ್ಘಾಟನಾ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಚಾನೆಲ್‌ಗಳಲ್ಲಿ ಟಿವಿಯಲ್ಲಿ ಪ್ರಸಾರ ಮಾಡಲಾಗುತ್ತದೆ.

ಉಭಯ ತಂಡಗಳು

ಇಂಗ್ಲೆಂಡ್ ತಂಡ: ನ್ಯಾಟ್ ಸಿವರ್-ಬ್ರಂಟ್ (ನಾಯಕಿ), ಲಾರೆನ್ ಬೆಲ್, ಆಲಿಸ್ ಕ್ಯಾಪ್ಸೆ, ಟಿಲ್ಲಿ ಕಾರ್ಟೀನ್-ಕೋಲ್ಮನ್, ಚಾರ್ಲಿ ಡೀನ್, ಸೋಫಿಯಾ ಡಂಕ್ಲೆ, ಸೋಫಿ ಎಕ್ಲೆಸ್ಟೋನ್, ಲಾರೆನ್ ಫೈಲರ್, ಡ್ಯಾನಿ ಗಿಬ್ಸನ್, ಆಮಿ ಜೋನ್ಸ್, ಫ್ರೇಯಾ ಕೆಂಪ್, ಹೀದರ್ ನೈಟ್, ಲಿನ್ಸೆ ಸ್ಮಿತ್, ಇಸ್ಸಿ ವಾಂಗ್, ಡ್ಯಾನಿ ವ್ಯಾಟ್-ಹಾಡ್ಜ್

ಶ್ರೀಲಂಕಾ ತಂಡ: ಚಾಮರಿ ಅಥಾಪತ್ತು (ನಾಯಕಿ), ಹಾಸಿನಿ ಪೆರೇರಾ, ವಿಶ್ಮಿ ಗುಣರತ್ನೆ, ಹರ್ಷಿತಾ ಸಮರವಿಕ್ರಮ, ಇಮೇಶಾ ದುಲಾನಿ, ನೀಲಾಕ್ಷಿಕಾ ಸಿಲ್ವಾ, ಕವೀಶಾ ದಿಲ್ಹಾರಿ, ಹನ್ಸಿಮಾ ಕರುಣಾರತ್ನೆ, ಕೌಶಿನಿ ನುತ್ಯಂಗನಾ, ಸುಗಂದಿಕಾ ದಾಸನಾಯಕ, ನಿಮಾಶಾ ಮದುಶಾನಿ, ಕಾವ್ಯಾ ಕವಿಂದಿ, ಮಾಲ್ಕಿ ಮಾದರ, ಮಿಥಾಲಿ ಅಯೋಧ್ಯಾ, ಚೇತನಾ ವಿಮುಕ್ತಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *