ಸಮಾಜದಲ್ಲಿ ಐಕ್ಯತೆ, ಸಾಮರಸ್ಯ, ಸೌಹಾರ್ದತೆ , ಮೂಲಭೂತ ಹಕ್ಕುಗಳ ನ್ಯಾಯವಿದ್ದರೆ ದೇಶ ಅಭಿವೃದ್ಧಿಯಾಗಲು ಸಾಧ್ಯ. ಹೀಗಾಗಿ ಈ ಸಾಮಾಜಿಕ ಅಸಮಾನತೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಪ್ರತಿ ವರ್ಷ ಫೆಬ್ರವರಿ 20 ರಂದು ವಿಶ್ವ ಸಾಮಾಜಿಕ ನ್ಯಾಯ ದಿನವನ್ನು (World Day Of Social Justice) ಆಚರಿಸಲಾಗುತ್ತದೆ.
ವಿಶ್ವ ಸಾಮಾಜಿಕ ನ್ಯಾಯ ದಿನದ ಇತಿಹಾಸವೇನು?
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ 2007 ಫೆಬ್ರವರಿ 20ರಂದು ವಿಶ್ವ ಸಾಮಾಜಿಕ ನ್ಯಾಯ ದಿನವನ್ನು ಅಂಗೀಕರಿಸಲಾಯಿತು. 2009ರಲ್ಲಿ ಈ ದಿನವನ್ನು ಆಚರಿಸಲು ಅನುಮೋದನೆ ನೀಡಲಾಯಿತು. ಸಾಮಾಜಿಕ ಅಸಮಾನತೆಯನ್ನು ತೊಡೆದು ಹಾಕುವ ಪ್ರಯತ್ನಗಳಿಗೆ ಉತ್ತೇಜನ ನೀಡಿ, ಸಾಮಾಜಿಕ ನ್ಯಾಯದ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಉದ್ದೇಶವು ಈ ದಿನದಾಗಿತ್ತು. ಹೀಗಾಗಿ ಅಂದಿನಿಂದ ಪ್ರತಿ ವರ್ಷ ವಿಶ್ವ ಸಾಮಾಜಿಕ ನ್ಯಾಯ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.
ಇದನ್ನೂ ಓದಿ:ಫೆಬ್ರವರಿ 14 ರಂದೇ ಪ್ರೇಮಿಗಳ ದಿನ ಆಚರಿಸುವುದು ಏಕೆ? ಇಲ್ಲಿದೆ ಕಾರಣ
ವಿಶ್ವ ಸಾಮಾಜಿಕ ನ್ಯಾಯ ದಿನದ ಮಹತ್ವವೇನು?
ಸುಸ್ಥಿರ ಅಭಿವೃದ್ಧಿ, ಬಡತನ ನಿರ್ಮೂಲನೆ, ಪೂರ್ಣ ಉದ್ಯೋಗ , ಯೋಗ್ಯ ಕೆಲಸದ ಪ್ರಚಾರ, ಸಾರ್ವತ್ರಿಕ ಸಾಮಾಜಿಕ ರಕ್ಷಣೆ, ಲಿಂಗ ಸಮಾನತೆ, ಸಾಮಾಜಿಕ ಯೋಗಕ್ಷೇಮ ಹಾಗೂ ಎಲ್ಲರಿಗೂ ನ್ಯಾಯ ದೊರಕುವ ಪರಿಹಾರಗಳನ್ನು ಹುಡುಕುವ ಅಂತಾರಾಷ್ಟ್ರೀಯ ಸಮುದಾಯವನ್ನು ಒಗ್ಗೂಡಿಸುವ ಸಲುವಾಗಿ ಈ ದಿನವೂ ಮಹತ್ವದ್ದಾಗಿದೆ. ಈ ವಿಶೇಷ ದಿನದಂದು ಜನರಲ್ಲಿ ಜಾಗೃತಿ ಮೂಡಿಸಲು ಹತ್ತು ಹಲವು ಕಾರ್ಯಕ್ರಮಗಳನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಮ್ಮಿಕೊಳ್ಳಲಾಗುತ್ತದೆ.
ಇನ್ನಷ್ಟು ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ