Headlines

World Intellectual Property Day 2026: ಬೌದ್ಧಿಕ ಆಸ್ತಿಗೆ ಬೆಲೆ ಕಟ್ಟಲು ಸಾಧ್ಯವೇ ಇಲ್ಲ – Kannada News | World Intellectual Property Day 2026: Why celebrate World Intellectual Property Day?

ವಿಶ್ವ ಬೌದ್ಧಿಕ ಆಸ್ತಿ ದಿನImage Credit source: Freepik

ಬೌದ್ಧಿಕ ಆಸ್ತಿ (Intellectual Property) ಎಂಬುದು ಮಾನವನ ಬುದ್ಧಿಶಕ್ತಿಯ ಅಮೂರ್ತ ಸೃಷ್ಟಿಯನ್ನು ಒಳಗೊಂಡಿರುವ ಆಸ್ತಿಯ ವರ್ಗವಾಗಿದ್ದು, ಇದು ಬೆಲೆ ಕಟ್ಟಲಾಗದಷ್ಟು ಅಮೂಲ್ಯವಾಗಿದೆ. ಪೇಟೆಂಟ್‌ಗಳು, ಹಕ್ಕುಸ್ವಾಮ್ಯಗಳು, ಟ್ರೇಡ್‌ಮಾರ್ಕ್‌ಗಳು ಮತ್ತು ವಿನ್ಯಾಸಗಳು, ಕೃತಿಸ್ವಾಮ್ಯ ಇವೆಲ್ಲವೂ ಬೌದ್ಧಿಕ ಆಸ್ತಿಗಳಾಗಿದ್ದು, ಲೇಖಕ, ಕಥೆಗಾರ, ವಿಜ್ಞಾನಿ ಹೀಗೆ ಹಲವಾರು ಕ್ಷೇತ್ರಗಳಲ್ಲಿ ತಮ್ಮ ಬುದ್ಧಿ ಶಕ್ತಿ ಹಾಗೂ ಸೃಜನಶೀಲತೆಯಿಂದ  ಹೊರ ತರುವ ಕಥೆ, ಸಂಗೀತ, ಪುಸ್ತಕ, ವಿನ್ಯಾಸಗಳನ್ನು ಬೇರೆ ಯಾರು ಕದಿಯದಂತೆ ಈ ಅಮೂಲ್ಯ ಬೌದ್ಧಿಕ ಆಸ್ತಿಯ ಹಕ್ಕುಗಳನ್ನು ರಕ್ಷಿಸಲು ಹಾಗೂ ಸೃಷ್ಟಿಕರ್ತರು, ಸಂಶೋಧಕರು, ಉದ್ಯಮಿಗಳ ಆಲೋಚನೆಗಳು ಮತ್ತು ಅವರು ನೀಡಿದ ಕೊಡುಗೆಗಳನ್ನು ಗೌರವಿಸಲು ಪ್ರತಿವರ್ಷ ಏಪ್ರಿಲ್‌ 26 ರಂದು  ವಿಶ್ವ ಬೌದ್ಧಿಕ ಆಸ್ತಿಯ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ ಮತ್ತು ಮಹತ್ವವನ್ನು ತಿಳಿಯೋಣ ಬನ್ನಿ.

ವಿಶ್ವ ಬೌದ್ಧಿಕ ಆಸ್ತಿ ದಿನದ ಇತಿಹಾಸವೇನು?

ವಿಶ್ವ  ಬೌದ್ಧಿಕ ಆಸ್ತಿ ದಿನವನ್ನು ಪ್ರತಿ ವರ್ಷ ಏಪ್ರಿಲ್‌ 26 ರಂದು ಆಚರಿಸಲಾಗುತ್ತದೆ.  ಈ ದಿನದ ಆಚರಣೆಯನ್ನು ವಿಶ್ವ ಬೌದ್ಧಿಕ ಆಸ್ತಿ ಸಂಸ್ಥೆ (WIPO) 2000 ರಲ್ಲಿ ಪ್ರಾರಂಭಿಸಿತು. ಈ ದಿನ 1970 ರಲ್ಲಿ ವಿಶ್ವ ಬೌದ್ಧಿಕ ಆಸ್ತಿ ಸಂಸ್ಥೆ (WIPO) ಯನ್ನು ಸ್ಥಾಪಿಸುವ ಸಮಾವೇಶವು ಜಾರಿಗೆ ಬಂದ ದಿನದ ಸ್ಮರಣಾರ್ಥವಾಗಿದೆ. ನಾವೀನ್ಯತೆ ಮತ್ತು ಸೃಜನಶೀಲತೆಯನ್ನು ಉತ್ತೇಜಿಸುವಲ್ಲಿ ಬೌದ್ಧಿಕ ಆಸ್ತಿ ಹಕ್ಕುಗಳ (ಪೇಟೆಂಟ್‌ಗಳು, ಹಕ್ಕುಸ್ವಾಮ್ಯಗಳು, ಟ್ರೇಡ್‌ಮಾರ್ಕ್‌ಗಳು ಮತ್ತು ವಿನ್ಯಾಸಗಳು) ಪ್ರಮುಖ ಪಾತ್ರದ ಬಗ್ಗೆ ಜಾಗೃತಿ ಮೂಡಿಸುವ ಗುರಿಯನ್ನು ಇಟ್ಟುಕೊಂಡು ಈ ದಿನದ ಆಚರಣೆಯನ್ನು ಪ್ರಾರಂಭಿಸಲಾಯಿತು. ಅಂದಿನಿಂದ ಪ್ರತಿವರ್ಷ ಏಪ್ರಿಲ್‌ 26 ರಂದು ಈ ವಿಶೇಷ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ.

ಇದನ್ನೂ ಓದಿ: ಏಪ್ರಿಲ್ 24 ರಂದೇ ರಾಷ್ಟ್ರೀಯ ಪಂಚಾಯತ್‌ ರಾಜ್‌ ದಿನ ಆಚರಿಸುವುದು ಏಕೆ?

ವಿಶ್ವ ಬೌದ್ಧಿಕ ಆಸ್ತಿ ದಿನದ ಮಹತ್ವವೇನು?

  • ವಿಶ್ವ ಬೌದ್ಧಿಕ ಆಸ್ತಿ ದಿನವನ್ನು ಆಚರಿಸುವ ಮೂಲ ಉದ್ದೇಶವೇ ಬೌದ್ಧಿಕ ಆಸ್ತಿಯ ಹಕ್ಕು, ನಾವೀನ್ಯತೆ ಮತ್ತು ಸೃಜನಶೀಲತೆಯನ್ನು ಉತ್ತೇಜಿಸುವಲ್ಲಿ ಬೌದ್ಧಿಕ ಆಸ್ತಿಯ ಪಾತ್ರದ ಬಗ್ಗೆ ಜಾಗೃತಿ ಮೂಡಿಸುವ ಹಾಗೂ ಬೌದ್ಧಿಕ ಆಸ್ತಿಗಳಿಗೆ ಅಂತರಾಷ್ಟ್ರೀಯ ಮಾನ್ಯತೆ ತಂದುಕೊಡುವುದಾಗಿದೆ
  • ಈ ದಿನ ಸೃಜನಶೀಲತೆ ಮತ್ತು ನಾವೀನ್ಯತೆಯನ್ನು ಪ್ರೋತ್ಸಾಹಿಸುತ್ತದೆ, ಇದು ಆರ್ಥಿಕ ಅಭಿವೃದ್ಧಿಯನ್ನು ಉತ್ತೇಜಿಸುತ್ತದೆ.
  • ಈ ಈ ದಿನದಂದು ಪ್ರಪಂಚದಾದ್ಯಂತ ವಿಚಾರ ಸಂಕಿರಣಗಳು, ಪ್ರದರ್ಶನಗಳು ಮತ್ತು ಸ್ಪರ್ಧೆಗಳು ಮುಂತಾದ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *