2026 ರ ಮಹಿಳಾ ಪ್ರೀಮಿಯರ್ ಲೀಗ್ನ ಎಲಿಮಿನೇಟರ್ ಪಂದ್ಯವು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಗುಜರಾತ್ ಜೈಂಟ್ಸ್ ನಡುವೆ ನಡೆಯಿತು. ಎರಡೂ ತಂಡಗಳು ಇದುವರೆಗೆ ಪ್ರಶಸ್ತಿ ಗೆಲ್ಲದ ಕಾರಣ ಯಾವ ತಂಡ ಫೈನಲ್ಗೇರಲಿದೆ ಎಂಬುದು ಕುತೂಹಲ ಮೂಡಿಸಿತ್ತು. ಅಂತಿಮವಾಗಿ ಡೆಲ್ಲಿ ತಂಡ ಗುಜರಾತ್ ತಂಡದ ಮೊದಲ ಫೈನಲ್ ಕನಸನ್ನು ಭಗ್ನಗೊಳಿಸಿ ಸತತ ನಾಲ್ಕನೇ ಬಾರಿಗೆ ಫೈನಲ್ಗೆ ಟಿಕೆಟ್ ಪಡೆಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಜೈಂಟ್ಸ್ 167 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ಇನ್ನು 26 ಎಸೆತಗಳು ಬಾಕಿ ಇರುವಂತೆಯೇ ಕೇವಲ 3 ವಿಕೆಟ್ ಕಳೆದುಕೊಂಡು ಜಯದ ನಗೆ ಬೀರಿತು. ಇದೀಗ ಡೆಲ್ಲಿ ಫೈನಲ್ ಪಂದ್ಯದಲ್ಲಿ ಆರ್ಸಿಬಿ ತಂಡವನ್ನು ಎದುರಿಸಲಿದೆ.
