WPL 2026: ಡಬ್ಲ್ಯುಪಿಎಲ್ ಇತಿಹಾಸದಲ್ಲಿ ಮೊದಲ ಹ್ಯಾಟ್ರಿಕ್ ಗೆಲುವು ದಾಖಲಿಸಿದ ಆರ್​ಸಿಬಿ – Kannada News | RCB Dominates Gujarat Giants in WPL: Shreyanka Patil Shines, Creates New History with 3rd Consecutive Win

ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್​ನ 9ನೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಜೈಂಟ್ಸ್ ತಂಡಗಳು ಮುಖಾಮುಖಿಯಾದ್ದವು. ಬಲಿಷ್ಠ ತಂಡಗಳ ನಡುವಿನ ಈ ಕಾಳಗ ಸಾಕಷ್ಟು ಕುತೂಹಲ ಕೆರಳಿಸಿತ್ತು. ಅಂತಿಮವಾಗಿ ಸ್ಮೃತಿ ಮಂಧಾನ ಪಡೆ, ಗುಜರಾತ್ ತಂಡವನ್ನು ಮಣಿಸಿ ಈ ಆವೃತ್ತಿಯಲ್ಲಿ ಸತತ ಮೂರನೇ ಜಯ ದಾಖಲಿಸಿದೆ. ಈ ಮೂಲಕ ಮಹಿಳಾ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಆವೃತ್ತಿಯ ಮೊದಲ ಮೂರು ಪಂದ್ಯಗಳನ್ನು ಗೆದ್ದ ದಾಖಲೆಯನ್ನು ಆರ್​ಸಿಬಿ ನಿರ್ಮಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಆರ್​ಸಿಬಿ 183 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಗುಜರಾತ್ ಕನ್ನಡತಿ ಶ್ರೇಯಾಂಕ ಪಾಟೀಲ್ ಅವರ ಮಾರಕ ದಾಳಿಗೆ ನಲುಗಿ 150 ರನ್​ಗಳಿಗೆ ಆಲೌಟ್ ಆಯಿತು. ಈ ಮೂಲಕ ಆರ್​ಸಿಬಿ ಈ ಪಂದ್ಯವನ್ನು 32 ರನ್​ಗಳಿಂದ ಗೆದ್ದುಕೊಂಡಿತು.

Source link

Leave a Reply

Your email address will not be published. Required fields are marked *