WPL 2026: ಮೊಟ್ಟ ಮೊದಲ ಬಾರಿಗೆ ಮುಂಬೈ ಮಣಿಸಿ ಪ್ಲೇಆಫ್​ಗೇರಿದ ಗುಜರಾತ್ – Kannada News | WPL 2026: Gujarat Giants Beat MI, Secure Playoff Spot. Mumbai’s Fate in Delhi’s Match

ಮಹಿಳಾ ಪ್ರೀಮಿಯರ್ ಲೀಗ್‌ನ 19ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದವು. ವಡೋದರಾದಲ್ಲಿ ನಡೆದ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ತಂಡವನ್ನು ಮಣಿಸುವ ಮೂಲಕ ಪ್ಲೇಆಫ್‌ಗೇರಿದೆ. ಇದು ಮಾತ್ರವಲ್ಲದೆ ಡಬ್ಲ್ಯುಪಿಎಲ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮುಂಬೈ ತಂಡವನ್ನು ಮಣಿಸಿದ ದಾಖಲೆಗೆ ಗುಜರಾತ್ ಕೊರಳೊಡ್ಡಿದೆ. ಇನ್ನು ಈ ಪಂದ್ಯದಲ್ಲಿ ಸೋತರೂ ಮುಂಬೈ ತಂಡಕ್ಕೆ ಪ್ಲೇಆಫ್‌ಗೇರುವ ಅವಕಾಶವಿದೆ. ಆದರೆ ನಾಳೆ ನಡೆಯಲಿರುವ ಪಂದ್ಯದಲ್ಲಿ ಡೆಲ್ಲಿ ತಂಡ ಸೋತರಷ್ಟೇ ಮುಂಬೈ ಪ್ಲೇಆಫ್‌ಗೇರಲಿದೆ. ಇಂದು ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್ 167 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಮುಂಬೈ 156 ರನ್ ಕಲೆಹಾಕಲಷ್ಟೇ ಶಕ್ತವಾಗಿ 11 ರನ್​ಗಳಿಂದ ಸೋಲಿಗೆ ಶರಣಾಯಿತು.

Source link

Leave a Reply

Your email address will not be published. Required fields are marked *