ಮಹಿಳಾ ಪ್ರೀಮಿಯರ್ ಲೀಗ್‌ನ ನಾಲ್ಕನೇ ಸೀಸನ್‌ನ ಲೀಗ್ ಹಂತದ 20ನೇ ಮತ್ತು ಅಂತಿಮ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಯುಪಿ ವಾರಿಯರ್ಸ್ ಪರಸ್ಪರ ಮುಖಾಮುಖಿಯಾಗಿದ್ದವು. ಬರೋಡಾದ ಕೋಟಂಬಿಯಲ್ಲಿರುವ ಬಿಸಿಎ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಯುಪಿ ವಾರಿಯರ್ಸ್ ತಂಡವನ್ನು ಮಣಿಸಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಎಲಿಮಿನೇಟರ್ ಸುತ್ತಿಗೆ ಅರ್ಹತೆ ಪಡೆದುಕೊಂಡಿದೆ. ಡೆಲ್ಲಿ ತಂಡದ ಈ ಗೆಲುವಿನೊಂದಿಗೆ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಲೀಗ್ ಹಂತದಲ್ಲೇ ತನ್ನ ಪ್ರಯಾಣ ಮುಗಿಸಿದೆ. ವಾಸ್ತವವಾಗಿ ಮುಂಬೈ ತಂಡ ಎಲಿಮಿನೇಟರ್ಗೆ ಅರ್ಹತೆ ಪಡೆಯಬೇಕಿದ್ದರೆ, ಈ ಪಂದ್ಯದಲ್ಲಿ ಡೆಲ್ಲಿ ಸೋಲಬೇಕಿತ್ತು. ಆದರೆ ಅದು ನಡೆಯಲಿಲ್ಲ. ಹೀಗಾಗಿ ಎಲಿಮಿನೇಟರ್ನಲ್ಲಿ ಗುಜರಾತ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಲಿವೆ.
