WPL 2026: ಯುಪಿ ವಿರುದ್ಧ ಗೆದ್ದ ಡೆಲ್ಲಿ; ಟೂರ್ನಿಯಿಂದ ಹೊರಬಿದ್ದ ಮುಂಬೈ

WPL 2026: ಯುಪಿ ವಿರುದ್ಧ ಗೆದ್ದ ಡೆಲ್ಲಿ; ಟೂರ್ನಿಯಿಂದ ಹೊರಬಿದ್ದ ಮುಂಬೈ

ಮಹಿಳಾ ಪ್ರೀಮಿಯರ್ ಲೀಗ್‌ನ ನಾಲ್ಕನೇ ಸೀಸನ್‌ನ ಲೀಗ್ ಹಂತದ 20ನೇ ಮತ್ತು ಅಂತಿಮ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಯುಪಿ ವಾರಿಯರ್ಸ್ ಪರಸ್ಪರ ಮುಖಾಮುಖಿಯಾಗಿದ್ದವು. ಬರೋಡಾದ ಕೋಟಂಬಿಯಲ್ಲಿರುವ ಬಿಸಿಎ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಯುಪಿ ವಾರಿಯರ್ಸ್​ ತಂಡವನ್ನು ಮಣಿಸಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಎಲಿಮಿನೇಟರ್ ಸುತ್ತಿಗೆ ಅರ್ಹತೆ ಪಡೆದುಕೊಂಡಿದೆ. ಡೆಲ್ಲಿ ತಂಡದ ಈ ಗೆಲುವಿನೊಂದಿಗೆ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಲೀಗ್ ಹಂತದಲ್ಲೇ ತನ್ನ ಪ್ರಯಾಣ ಮುಗಿಸಿದೆ. ವಾಸ್ತವವಾಗಿ ಮುಂಬೈ ತಂಡ ಎಲಿಮಿನೇಟರ್​ಗೆ ಅರ್ಹತೆ ಪಡೆಯಬೇಕಿದ್ದರೆ, ಈ ಪಂದ್ಯದಲ್ಲಿ ಡೆಲ್ಲಿ ಸೋಲಬೇಕಿತ್ತು. ಆದರೆ ಅದು ನಡೆಯಲಿಲ್ಲ. ಹೀಗಾಗಿ ಎಲಿಮಿನೇಟರ್​ನಲ್ಲಿ ಗುಜರಾತ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಲಿವೆ.

Source link

Leave a Reply

Your email address will not be published. Required fields are marked *