ಮಹಿಳಾ ಪ್ರೀಮಿಯರ್ ಲೀಗ್ನ 4ನೇ ಆವೃತ್ತಿಯಲ್ಲಿ ಆರ್ಸಿಬಿ ಅದ್ಭುತ ಆರಂಭ ಪಡೆದುಕೊಂಡಿದೆ. ಆಡಿದ ಎರಡೂ ಪಂದ್ಯಗಳನ್ನು ಗೆದ್ದಿರುವ ಸ್ಮೃತಿ ಮಂಧಾನ ಪಡೆ 4 ಪಾಯಿಂಟ್ಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ತನ್ನ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಕೊನೆಯ ಓವರ್ನ ಕೊನೆಯ ಎಸೆತದಲ್ಲಿ ಸೋಲಿಸಿದ್ದ ಆರ್ಸಿಬಿ, ಇದೀಗ ತನ್ನ ಎರಡನೇ ಪಂದ್ಯದಲ್ಲಿ ಯುಪಿ ವಾರಿಯರ್ಸ್ ತಂಡವನ್ನು 9 ವಿಕೆಟ್ಗಳಿಂದ ಮಣಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಯುಪಿ ತಂಡ 144 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಆರ್ಸಿಬಿ 12.1 ಓವರ್ಗಳಲ್ಲಿ ಕೇವಲ 1 ವಿಕೆಟ್ ಕಳೆದುಕೊಂಡು ಜಯದ ನಗೆ ಬೀರಿತು.
